ಮೂಡಬಿದಿರೆ: ಮಿಜಾರ್‌ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಾಂಗ್ ಸೈಡ್‌ನಲ್ಲಿ ಬಂದ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಇರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಬೆನ್ನಲ್ಲೇ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.