ಮಂಗಳೂರು : ಕಾವೂರು ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 1 ಸ್ಕೂಟರ್ ಹಾಗೂ 2 ಬೈಕ್ಗಳ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರರಿಗೆ ಗಂಭೀರ ಗಾಯವಾಗಿದೆ.
ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಮುಖ್ಯ ರಸ್ತೆಯಾಗಿದ್ದರೂ ಆ ಸಮಯದಲ್ಲಿ ವಾಹನ ಸಂಚಾರ ಕಡಿಮೆ ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

