ಬಂಟ್ವಾಳ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿತಗಲಿ ಮನೆ ಸಂಪೂರ್ಣ ಹೊತ್ತಿ ಉರಿದ ಘಟನೆ ಸೋಮವಾರ ನಸುಕಿನಲ್ಲಿ ನರಿಕೊಂಬು ಗ್ರಾಮದಲ್ಲಿ ನಡೆದಿದೆ.

ಬೋರುಗುಡ್ಡೆ ಎಂಬಲ್ಲಿನ ನಿವಾಸಿ ರಮೇಶ್ ಎಂಬವರ ಮನೆಗೆ ಈ ಆಕಸ್ಮಕ ಬೆಂಕಿ ತಗಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮುಂಜಾನೆ 4 ಗಂಟೆಯ ವೇಳೆ ಈ ಘಟನೆ ನಡೆದಿದ್ದು, ಮಲಗಿದ್ದ ಮನೆಮಂದಿ ಹೊರ ಬಂದು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

ಮನೆಯೊಳಗಿದ್ದ ವಿದ್ಯುತ್ ಉಪಕರಣಗಳು, ಇತರ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ತಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸರ್ಕಾರದಿಂದ ಪರಿಹಾರ ಕ್ರಮದ ಭರವಸೆ ನೀಡಿದ್ದಾರೆ.

