ಮಂಗಳೂರು: ಪವರ್‌ ಶೇರಿಂಗ್‌ ಬಗ್ಗೆ ಪ್ರತಿಕ್ರಿಯೆ ನೀಡಲು ನಾನು ಸಂಬಂಧಪಟ್ಟವನಲ್ಲ. ಈ ಬಗ್ಗೆ ಕೆ.ಸಿ. ವೇಣುಗೋಪಾಲ್‌ ಅಥವಾ ಬೆಂಗಳೂರಿನಲ್ಲಿರುವ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೇಳಬಹುದು ಎಂದು ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿ. 3ರ ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಹಾಗಾಗಿ ಈ ಊಹಾಪೋಹಗಳು ಬೇಡ’. ಮತ ಕಳ್ಳತನ ಅಭಿಯಾನದ ಭಾಗವಾಗಿ ರಾಮ್‌ ಲೀಲಾ ಮೈದಾನದಲ್ಲಿ ಡಿ. 14ರಂದು ಕಾರ್ಯಕ್ರಮ ನಡೆಯಲಿದೆ.

ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಯಾವ ರೀತಿಯಲ್ಲಿ ತಪ್ಪು ದಾರಿಯಲ್ಲಿ ನಡೆದಿದೆ ಎಂಬ ಕುರಿತಂತೆ ಅಭಿಯಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ 1.4 ಕೋಟಿ ಸಹಿ ಸಂಗ್ರಹ ನಡೆದಿದೆ. ದೇಶದ ವಿವಿಧ ರಾಜ್ಯಗಳಿಂದ ಒಟ್ಟು 5 ಕೋಟಿ ಸಹಿ ಸಂಗ್ರಹವನ್ನು ಆ ದಿನ ರಾಷ್ಟ್ರಪತಿಗೆ ಸಲ್ಲಿಸಲಾಗುವುದು.

ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಆಶ್ರಯದಲ್ಲಿ ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದ ಶತಮಾನೋತ್ಸವ ಡಿ. 3ರಂದು  ನಡೆಯಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ನೀಡಿದ್ದಾರೆ.