Bengaluru 28°C
Ad

ನಾನು ಹಾಗೂ ಸಿಎಂ ಮಂಜುನಾಥನ ದರ್ಶನ ಪಡೆದಿದ್ದೇವೆ: ಡಿ.ಕೆ ಶಿವಕುಮಾರ್

ನಾನು ಹಾಗೂ ಸಿಎಂ ಮಂಜುನಾಥನ ದರ್ಶನ ಪಡೆದಿದ್ದೇವೆ. ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭ ಆಗಿದೆ. ಸಿಎಂ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. ಇವತ್ತು ನಮ್ಮ ಧರ್ಮದ ಸಂಪ್ರದಾಯದಂತೆ ಬಂದು ದರ್ಶನ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮಂಗಳೂರು: ನಾನು ಹಾಗೂ ಸಿಎಂ ಮಂಜುನಾಥನ ದರ್ಶನ ಪಡೆದಿದ್ದೇವೆ. ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭ ಆಗಿದೆ. ಸಿಎಂ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. ಇವತ್ತು ನಮ್ಮ ಧರ್ಮದ ಸಂಪ್ರದಾಯದಂತೆ ಬಂದು ದರ್ಶನ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಅಂತ ಮಾತಿದೆ. ಮಂಜುನಾಥನಿಗೆ ನಮಸ್ಕಾರ ಹೇಳಲು ಬಂದಿದ್ದೇವೆ. ರಾಜ್ಯದ ಜನತೆ ಪರವಾಗಿ ಹಾಗೂ ವೈಯಕ್ತಿಕ ಪ್ರಾರ್ಥನೆ ಮಾಡಿದ್ದಾರೆ. ಧರ್ಮಸ್ಥಳದ ಹೆಗ್ಗಡೆಯವರು ಹೇಳಿದ್ದಾರೆ ನಾನಾ ಭಾಗದಿಂದ ಶಕ್ತಿ ಯೋಜನೆ ಪ್ರಯೋಜನ ಪಡೆದು ಕ್ಷೇತ್ರಕ್ಕೆ ಬರುತ್ತಿದ್ದಾರೆ ಎಂದರು.

ಧರ್ಮಸ್ಥಳಕ್ಕೆ ಶಕ್ತಿ ಯೋಜನೆಯಿಂದ ಸಾವಿರಾರು ಮಂದಿ ಬಂದಿದ್ದಾರೆ. ಈಗಲೂ ಸಿಎಂ ಹಾಗೂ ನನಲ್ಲಿ ಸಂತೋಷ ವ್ಯಕ್ತಪಡಿಸಿದರು. ದೇವಸ್ಥಾನದ ಒಳಗೆ ಮಹಿಳೆಯರು ಎರಡು ಸಾವಿರ ಸಿಗುತ್ತದೆ ಅಂತ ಹೇಳಿದ್ದಾರೆ. ಅವರೆಲ್ಲರ ಆಶೀರ್ವಾದ ನಮಗೆ ಶಕ್ತಿ ತುಂಬಿದೆ. ಮನೆಯಲ್ಲಿ ಜ್ಯೋತಿ ಬೆಳಗಿದೆ, ಗೃಹ ಲಕ್ಷ್ಮಿ ಸಿಗುತ್ತಿದೆ. ಅನ್ನ ಭಾಗ್ಯ ಸಿಗುತ್ತಿದೆ ಎಲ್ಲ ಸೌಕರ್ಯ ಸಿಗುತ್ತಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Ad
Ad
Nk Channel Final 21 09 2023
Ad