ಮಂಗಳೂರು : ನಾನು ತಪ್ಪು ಮಾಡಿದ್ದೇನೆ. ಹೇಗೂ ತಪ್ಪಾಗಿ ಹೋಗಿದೆ. ಈಗ ಮಗುವಿನ ತಂದೆ ಯಾರು ಎಂದು ಯಾರಾದರೂ ಕೇಳಿದರೆ ನಾನು ಏನೆಂದು ಹೇಳಲಿ, ಅದನ್ನು ನೆನೆಸುವಾಗ ಸಾಯುವ ಎಂದಾಗುತ್ತಿದೆ ಮಂಗಳೂರಿನಲ್ಲಿ ನಡೆದ ಪತ್ರಿಕಗೋಷ್ಟಿಯಲ್ಲಿ ಸಂತ್ರಸ್ತೆ ಪೂಜಾ ತನ್ನ ಅಳಲನ್ನ ತೋರ್ಪಡಿಸಿದರು.
ನನ್ನ ಮಗಳಿಂದ ತಪ್ಪಾಗಿದೆ, ಆತನೂ ತಪ್ಪು ಮಾಡಿದ್ದಾನೆ. ಇದು ಅವರದೇ ಮಗು ಎಂಬುದು ಡಿಎನ್ಎ ಪರೀಕ್ಷೆಯಲ್ಲೂ ಸಾಬೀತಾಗಿದೆ. ನಮಗೆ ನ್ಯಾಯ ಬೇಕು. ಆತ ಪೂಜಾಳನ್ನು ಮದುವೆ ಆಗಿ ಒಳ್ಳೆಯದರಲ್ಲಿ ಸಂಸಾರ ನಡೆಸಬೇಕು ಎಂದು ಸಂತ್ರಸ್ತೆಯ ತಾಯಿ ನಮಿತಾ ವಿನಂತಿಸಿದರು.

