ಮಂಗಳೂರು: ಬುಧವಾರ ಮುಂಜಾನೆ 4:30ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಳಿ ಅಕ್ರಮ ಗೋ ಸಾಗಾಟವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಬಜರಂಗದಳ ಸಂಘಟನೆಯ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ, ಫಾರ್ಚುನರ್ ಕಾರಿನಲ್ಲಿ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ.

ಪೊಲೀಸರು ಕಾರನ್ನು ತಡೆದ ಕೂಡಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರನ್ನು ಪರಿಶೀಲಿಸಿದಾಗ ದನಗಳ ಜೊತೆಗೆ ಮಾರಕಾಯುಧಗಳು ಪತ್ತೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಐಷಾರಾಮಿ ಫಾರ್ಚುನರ್ ಕಾರು, 4 ದನಗಳು ಮತ್ತು ಮಾರಕಾಯುಧಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

View this post on Instagram

A post shared by News Karnataka (@newskarnataka)