ಮಂಗಳೂರು : ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಾಟ ಮಾಡುತಿದ್ದ ಅಕ್ರಮ ಜಾನುವಾರುವನ್ನು ಭಜರಂಗದಳ ಮಾಹಿತಿಯ ಮೇರೆಗೆ ಮಂಗಳೂರು ಜೆಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟ್ರಕ್ನಲ್ಲಿ 27 ಜಾನುವಾರುವನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದರು. ಹಾವೇರಿಯಿಂದ ಮಂಗಳೂರು ಮೂಲಕ ಕೇರಳಕ್ಕೆ ಸಾಗಾಟದ ಮಾಹಿತಿ ಲಭ್ಯವಾಗಿತ್ತು. ಇಬ್ಬರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

