Bengaluru 24°C
Ad

ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಕಡಲು ಕೊರೆತ ತೀವ್ರ, ಮನೆ ಕುಸಿತ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ತುಂಬಿ ಹರಿಯುತ್ತಿದ್ದು ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಕಡಲು ಕೊರೆತ ತೀವ್ರಗೊಂಡಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ತುಂಬಿ ಹರಿಯುತ್ತಿದ್ದು ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಕಡಲು ಕೊರೆತ ತೀವ್ರಗೊಂಡಿದೆ.

ಅಪಾಯಕ್ಕೀಡಾದ ಮನೆಯಲ್ಲಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಸ್ಥಳಾಂತರಿಸಿದ ಬೆನ್ನಲ್ಲೇ ಆ ಮನೆಯನ್ನ ಕಡಲಿನ ರಕ್ಕಸ ಅಲೆಗಳು ನುಂಗಿ ಹಾಕಿವೆ. ಮತ್ತೆ ಅಪಾಯ ಎದುರಿಸುತ್ತಿರುವ ಮೂರು ಮನೆಗಳ ಕುಟುಂಬ ಸದಸ್ಯರನ್ನ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಡ

ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿಗಳಾದ ಮತ್ತಡಿ, ತಹಶೀಲ್ದಾ‌ರ್ ಪ್ರದೀಪ್ ಕೊರ್ಡೆಕರ್ ಸಹಿತ ಹಲವು ಅಧಿಕಾರಿಗಳು ಬಟ್ಟಪ್ಪಾಡಿಗೆ ತೆರಳಿ ಅಪಾಯದಲ್ಲಿರುವ ಮನೆಗಳನ್ನು ತೆರವುಗೊಳಿಸಿದ್ದಾರೆ. ಅಲೆಗಳ ಅರ್ಭಟಕ್ಕೆ ಮನೆಯೊಂದು ಕುಸಿದು ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

Ad
Ad
Nk Channel Final 21 09 2023
Ad