Bengaluru 22°C
Ad

ಬಂಟ್ಸ್ ಹಾಸ್ಟೆಲ್ : ಬಂಟ ಕ್ರೀಡೋತ್ಸವ ಉದ್ಘಾಟನೆ 

ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವಗಳಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಉದ್ಯಮಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ.ಸುಂದರ ಶೆಟ್ಟಿ ಹೇಳಿದರು.  ಅವರು ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ-2024 ಉದ್ಘಾಟಿಸಿದರು. 
ಮಂಗಳೂರು: ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವಗಳಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಉದ್ಯಮಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ.ಸುಂದರ ಶೆಟ್ಟಿ ಹೇಳಿದರು.  ಅವರು ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ-2024 ಉದ್ಘಾಟಿಸಿದರು.

ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಟಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ ಅವರು ಮಾತನಾಡಿ, ಈ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾ ಪಟುಗಳಿಗೆ ರಾಷ್ಟ್ರ -ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅವಕಾಶ ಒದಗಿ ಬರಲಿ ಎಂದು ಹಾರೈಸಿದರು. ಉದ್ಯಮಿ ಪುರುಷೋತ್ತಮ ರೈ,  ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ, ಡಾ. ಸಂಜೀವ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ,  ಕೋಶಾಧಿಕಾರಿ ಸಿ ಎ ರಾಮ ಮೋಹನ್ ರೈ,  ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ರವಿರಾಜ್ ಶೆಟ್ಟಿ ನಿಟ್ಟೆಗುತ್ತು,  ಶೆಡ್ಡೆ ಮಂಜುನಾಥ್ ಭಂಡಾರಿ, ಕೃಷ್ಣ ಪ್ರಸಾದ್ ರೈ,  ತಾಲೂಕು ಸಮಿತಿಯ ಅಧ್ಯಕ್ಷ ವಸಂತ ಶೆಟ್ಟಿ,  ಜಯರಾಮ ಸಾಂತ, ಗಣೇಶೋತ್ಸವ ಸಮಿತಿಯ ಸಂಚಾಲಕರುಗಳಾದ ದಿವಾಕರ ಸಾಮಾನಿ, ಅಶ್ವತ್ತಾಮ ಹೆಗ್ಡೆ,  ಮನೀಶ್ ರೈ ಹಾಗೂ ಸಂತೋಷ್ ಶೆಟ್ಟಿ ಶೆಡ್ಡೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಖ್ಯಾತ ಚಿತ್ರ ಕಲಾವಿದೆ ಆಶ್ರಿತಾ ರೈ ಅವರು ಕನ್ನಡಾಂಬೆಯ ಚಿತ್ರ ರಚಿಸಿದರು. ಕ್ರೀಡಾ ಕೂಟದ ಸಂಚಾಲಕ ಕಿರಣ್ ಪಕ್ಕಳ ಸ್ವಾಗತಿಸಿದರು.  ಸಂಚಾಲಕಿ ನಿವೇದಿತಾ ಎನ್.ಶೆಟ್ಟಿ ವಂದಿಸಿದರು.  ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಹಾಗೂ ಪ್ರಕಾಶ್ ಮೇಲಂಟ ನಿರೂಪಿಸಿದರು.
Ad
Ad
Nk Channel Final 21 09 2023