Ad

ಕೆನರಾ ವಿಕಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

 ಕೆನರಾ ವಿಕಾಸ್ ಸಮೂಹ ಸಂಸ್ಥೆಯ ಆವರಣದಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕ್ರೀಡಾ ಭಾರತಿ ಸಹಯೋಗದೊಂದಿಗೆ ಆಚರಿಸಲಾಯಿತು.

ಮಂಗಳೂರು: ಕೆನರಾ ವಿಕಾಸ್ ಸಮೂಹ ಸಂಸ್ಥೆಯ ಆವರಣದಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕ್ರೀಡಾ ಭಾರತಿ ಸಹಯೋಗದೊಂದಿಗೆ ಆಚರಿಸಲಾಯಿತು.

Ad
300x250 2

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿ ಸದಸ್ಯ ಹಾಗೂ ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಸಂಯೋಜಕ  ಬಸ್ತಿ ಪುರುಷೋತ್ತಮ ಶೆಣೈ ಅವರು ಇಂದಿನ ಯುವ ಜನತೆಗೆ ಯೋಗದ ಅನಿವಾರ್ಯತೆಯ ಕುರಿತು ಮಾತನಾಡುತ್ತಾ, ಯೋಗದ ಮೂಲ ಹಾಗೂ ದೇಹ ಮತ್ತು ಮನಸ್ಸುಗಳನ್ನು ಒಂದುಗೂಡಿಸುವಲ್ಲಿ ಯೋಗದ ಪಾತ್ರವನ್ನು ವಿವರಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ರೀಡಾ ಭಾರತಿ ಮಂಗಳೂರು, ಇದರ ಅಧ್ಯಕ್ಷರಾದ ಕರಿಯಪ್ಪ ರೈ ಮಾತನಾಡುತ್ತಾ, ಕಳೆದ ಕೆಲವು ವರ್ಷಗಳಿಂದ ಜಾಗತಿಕ ಮಟ್ಟದಲ್ಲಿ ಯೋಗ ತನ್ನದೇ ಆದ ಮಹತ್ವವನ್ನು ಪಡೆಯುತ್ತಿದೆ, ಯೋಗದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಂಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ  ಐಶ್ವರ್ಯ ಕೆ., ಕೆನರಾ ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ  ಸುಗುಣ ನಾಯಕ್ ಉಪಸ್ಥಿತರಿದ್ದರು. ನೀನಾ ಪೈ,  ಸಂತೋಷ್ ಶೆಟ್ಟಿ ಯೋಗ ಅವಧಿಯನ್ನು ನೆರವೇರಿಸಿದರು. ಕ್ರೀಡಾ ಭಾರತಿ ಮಂಗಳೂರು, ಇದರ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ ತಾರೆಮಾರ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಇದರ ಸದುಪಯೋಗ ಪಡೆದರು.

Ad
Ad
Nk Channel Final 21 09 2023
Ad