ಮಂಗಳೂರು: ನಿನ್ನೆ ಎಂಆರ್ಪಿಎಲ್ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಸಂತ ಜೋಸೆಫ್ ಚರ್ಚ್, ಪೆಜಾರ್ನ ಛಾವಣಿ ಸೇರಿದಂತೆ ಕಟ್ಟಡದ ಭಾಗಗಳಿಗೆ ಹಾನಿಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಹಾನಿಯ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

