Bengaluru 30°C
Ad

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಆಯ್ಕೆ

Karunakar

ಮಂಗಳೂರು: ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು ಮಂಡಿಸಲಾಯಿತು.

ಬಳಿಕ ಸಂಜೆ ನಡೆದ ಬಹಿರಂಗ ಅಧಿವೇಶನದಲ್ಲಿ ಕರುಣಾಕರ ಶೆಟ್ಟಿ ಅವರನ್ನು ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು. ಬಳಿಕ ಸಂಘದ. ವತಿಯಿಂದ ಕರುಣಾಕರ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಬಳಿಕ ಮಾತನಾಡಿದ ಕರುಣಾಕರ ಶೆಟ್ಟಿ ಅವರು ದೊಡ್ಡ ಜವಾಬ್ದಾರಿಯನ್ನು ನೀಡಿದ್ದೀರಿ. ಇದಕ್ಕೆ ಪ್ರತಿಯೊಬ್ಬ ಸದಸ್ಯರ ಸಹಕಾರ ಬೇಕು. ಸುರತ್ಕಲ್ ನಲ್ಲಿ ಭವ್ಯವಾದ ಹವಾನಿಯಂತ್ರಿತ ಕಟ್ಟಡವನ್ನು ನಿರ್ಮಿಸೋಣ ಎಂದರು. ಈ ಸಂದರ್ಭದಲ್ಲಿ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಮಾಜೀ ಅಧ್ಯಕ್ಷರಾದ ದೇವಾನಂದ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad