Bengaluru 26°C
Ad

ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 24 ರಂದು ಸಂಜೆ ಗಂಟೆ 6ಕ್ಕೆ ಮಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಡಾ|ಟಿ.ಎಂ.ಎ.ಪೈ ಸಭಾಂಗಣದಲ್ಲಿ ನೆರವೇರಲಿದೆ.

ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 24 ರಂದು ಸಂಜೆ ಗಂಟೆ 6ಕ್ಕೆ ಮಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಡಾ|ಟಿ.ಎಂ.ಎ.ಪೈ ಸಭಾಂಗಣದಲ್ಲಿ ನೆರವೇರಲಿದೆ.

ಈ ಸಮಾರಂಭದ ಮುಖ್ಯ ಅತಿಥಿಯಾಗಿ ಶ್ರೀ ಗಣೇಶ್ ಎನ್.ನಾಯಕ್, ಕಾರ್ಯ ನಿರ್ವಾಹಕ ನಿರ್ದೇಶಕರು, Zydus Lifesciences Limited ಪಾಲ್ಗೊಳ್ಳಲಿದ್ದಾರೆ. ಶ್ರೀ ಗಣೇಶ್ ನಾಯಕ್ ಅವರು ಔಷಧೀಯ ವೃತ್ತಿಯಲ್ಲಿ ಸುಮಾರು 47 ವರ್ಷಗಳ ಅನುಭವ ಸಂಪಾದಿಸಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಸ್ಥೆಯ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆ ವಿವಿಯ ಸಹ ಕುಲಾಧಿಪತಿ ಡಾ|ಎಚ್.ಎಸ್.ಬಲ್ಲಾಳ್, ಕುಲಪತಿ ಲೆ|ಜಡಾ|ಎಂ.ಡಿ.ವೆಂಕಟೇಶ್, ಸಹ ಕುಲಪತಿಗಳಾದ ಡಾ|ದಿಲೀಪ್.ಜಿ.ನಾಯಕ್‌ ಹಾಗೂ ಡಾ|ಶರತ್ ಕೆ. ರಾವ್ ಅವರು ಭಾಗವಹಿಸಲಿದ್ದಾರೆ.

C

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಶಿಕ್ಷಕರುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪದಾನ ಮಾಡಲಾಗುವುದು. ಕಾಲೇಜಿನ ಅತ್ಯುತ್ತಮ ನಿರ್ಗಮನ ವಿದ್ಯಾರ್ಥಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು.

ಕಸ್ತೂರ್ಬಾ ಮೆಡಿಕಲ್ ಕಾಲೇಜು ಸ್ಥಾಪನೆಗೊಂಡು 70 ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಂದಿನ ವರ್ಷ ನಡೆಯಲಿರುವ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ ಮಾಡಲಾಗುವುದು.

C 1

ಇಡೀ ಸಮಾರಂಭದ ನೇರ ಪ್ರಸಾರವನ್ನು YouTube ಮೂಲಕ ಮಾಡಲಾಗುವುದು. ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜು 1955 ರಲ್ಲಿ ಸ್ಥಾಪನೆಗೊಂಡಿದ್ದು ನಗುಣಮಟ್ಟದ ಶಿಕ್ಷಣ, ಆರೋಗ್ಯ ಹಾಗೂ ಸಂಶೋಧನೆಯ ಮೂಲಕ ಪ್ರಸಿದ್ಧವಾಗಿದೆ.

ಈ ಕಾಲೇಜು ಸರಕಾರಿ-ಖಾಸಗಿ ಒಡಂಬಡಿಕೆಯ ಮೂಲಕ ಸ್ಥಾಪನೆಯಾದ ಇಡೀ ದೇಶದಲ್ಲಿಯೇ ಪ್ರಪ್ರಥಮ ಕಾಲೇಜು ಎಂಬ ಹೆಗ್ಗಳಿಕೆ ಹೊಂದಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿವಿಧ ವಿಭಾಗಗಳನ್ನು ಹೊಂದಿರುತ್ತದೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಈ ಕಾಲೇಜು ಹೊಂದಿದ್ದು, ದೇಶ-ವಿದೇಶದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Ad
Ad
Nk Channel Final 21 09 2023
Ad