ಮಂಗಳೂರು: ಕೂಳೂರು ಜಂಕ್ಷನ್‌ನಿಂದ ಬೈಕಂಪಾಡಿ ಹಾಗೂ ಸುರತ್ಕಲ್‌ವರೆಗಿನ ರಸ್ತೆ ಅವ್ಯವಸ್ಥೆ ಮತ್ತು ನಿರಂತರ ಟ್ರಾಫಿಕ್ ಜಾಮ್‌ನಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ರಾಜಕೇಸರಿ ಸೇವಾ ಟ್ರಸ್ಟ್‌ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಳೂರು–ಬೈಕಂಪಾಡಿ ನಡುವಿನ ರಸ್ತೆ ಗುಂಡಿಗಳಿಂದ ಹದಗೆಟ್ಟಿದ್ದು, ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಇದೆ. ಪಾದಚಾರಿಗಳಿಗೆ ರಸ್ತೆ ದಾಟಲು ಸೂಕ್ತ ವ್ಯವಸ್ಥೆಯಿಲ್ಲದೆ, ಶಾಲಾ ಮಕ್ಕಳು, ವಾಹನ ಸವಾರರು ಹಾಗೂ ಭಾರಿ ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸರ್ವಿಸ್ ರಸ್ತೆಗಳ ಸ್ಥಿತಿಯೂ ಹದಗೆಟ್ಟಿದ್ದು, ಪೊಲೀಸ್ ಸಂಚಾರ ಇಲಾಖೆ, ಪಿಡಬ್ಲ್ಯುಡಿ, ಮಹಾನಗರ ಪಾಲಿಕೆ, ಸಾರಿಗೆ ಇಲಾಖೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಯಾವುದೇ ಅನಾಹುತ ಸಂಭವಿಸುವ ಮುನ್ನ ರಸ್ತೆ ದುರಸ್ತಿ ಹಾಗೂ ಸಂಚಾರ ವ್ಯವಸ್ಥೆ ಸುಧಾರಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಂತೋಷ್ ಕೊಲ್ಯ ಆಗ್ರಹಿಸಿದ್ದಾರೆ.

View this post on Instagram

A post shared by News Karnataka (@newskarnataka)