ಬೆಳ್ತಂಗಡಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ಸಪ್ಟೆಂಬರ್ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.
ಮಾನ್ಯ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಕುತ್ಲೂರು ಗ್ರಾಮಸ್ಥರ ಪರವಾಗಿ ಹರೀಶ್ ಡಿ ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
Ad