ಮಂಗಳೂರು: ಕಳೆದ ಅನೇಕ ದಿನಗಳಿಂದ ಚಿರತೆ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚಾಗಿದ್ದು, ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಹಾವಳಿಯಿಂದ ಬೆಳ್ತಂಗಡಿ ತಾಲೂಕಿನ ರೈತರು ಕಂಗೆಟ್ಟಿದ್ದರು.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ವಿಶೇಷ ತಂಡ ರಚಿಸಿ ತಾಲೂಕಿನ ಅನೇಕ ಕಡೆಗಳಲ್ಲಿ ಬೋನ್ ಅಳವಡಿಕೆಯನ್ನು ಅರಣ್ಯ ಇಲಾಖೆ ಮಾಡಿತ್ತು. ಬೋನ್ ಗೆ ಬೀಳುವ ದೃಶ್ಯ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

