ಮಂಗಳೂರು: ಬೆಳ್ಳಂ ಬೆಳಗ್ಗೆ ಮಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ ನಡೆಸಿದ್ದಾರೆ.
Ad
ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿಗೂ ಏಕಕಾಲದಲ್ಲಿ ದಾಳಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಕೃಷ್ಣವೇಣಿ ಮಂಗಳೂರಿಗೆ ವರ್ಗಾವಣೆಯಾಗಿದ್ದಾರೆ.
Ad
ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.
Ad
Ad