ಕೊಣಾಜೆ: ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕಂಬಳಪದವು ಬಳಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭದಲ್ಲಿ ತಲೆಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದು, ಸಾರ್ವಜನಿಕರು ಪರಿಸರದ ನಿವಾಸಿಗಳು ಆಕ್ರೋಶಗೊಂಡಿದ್ದರು. ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

