Bengaluru 25°C
Ad

ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ದ ಮಧೂರು ದೇವಸ್ಥಾನ ಜಲಾವೃತ

ಮಂಗಳೂರು ಗಡಿಭಾಗ ಕಾಸರಗೋಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಕೇರಳದ ಕಾಸರಗೋಡು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ.

ಮಂಗಳೂರು: ಮಂಗಳೂರು ಗಡಿಭಾಗ ಕಾಸರಗೋಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಕೇರಳದ ಕಾಸರಗೋಡು ಜಿಲ್ಲೆಯಾದ್ಯಂತ ವರುಣನ ಆರ್ಭಟ ಮತ್ತಷ್ಟು ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ಸಿದ್ಧವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ. ಮಳೆಯಿಂದಾಗಿ ಮಧುವಾಹಿನಿ ನದಿ ತುಂಬಿ ತುಳುಕಿದ್ದು, ದೇವಸ್ಥಾನದ ಒಳಭಾಗದಲ್ಲಿ ನಾಲ್ಕೈದು ಅಡಿ ನೀರು ತುಂಬಿಕೊಂಡಿದೆ.

ದೇವಸ್ಥಾನ ಸುತ್ತಮುತ್ತಲ ಪ್ರದೇಶ ಜಲಾವೃತವಾಗಿದ್ದು, ದ್ವೀಪದಂತೆ ಗೋಚರವಾಗುತ್ತಿದೆ. ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Ad
Ad
Nk Channel Final 21 09 2023
Ad