ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಇಂದು(ಜುಲೈ ೦೩) ನಡೆದಿದೆ. ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್ ಗೆ ಸೇರಿದ ಕಟ್ಟಡ ಇದಾಗಿದೆ.
ಇನ್ನು ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮಣ್ಣಿನಡಿ ಸಿಲುಕಿದ ಕಾರ್ಮಿಕರಿಗಾಗಿ ಈಗಾಗಲೇ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರದಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿರುವ ಗುಡ್ಡ ಕುಸಿದು ಈ ದುರ್ಘಟನೆ ನಡೆದಿದೆ.

