Bengaluru 21°C
Ad

ಬಿಜೆಪಿ ವಿಜಯೋತ್ಸವ ಮೆರವಣಿಗೆಯಲ್ಲಿ ಚಾಕು ಇರಿತ : ಆರು ಮಂದಿ ಬಂಧನ, 20 ಜನ ವಶಕ್ಕೆ

ಮಂಗಳೂರಿನ ಹೊರ ವಲಯ ಬೋಳ್ಯಾರ್‌ನಲ್ಲಿ ಚೂರಿ ಇರಿತ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ ಹಾಗೂ ಮೂರು ತಂಡ ರಚಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಮಂಗಳೂರಿನ ಹೊರ ವಲಯ ಬೋಳ್ಯಾರ್‌ನಲ್ಲಿ ಚೂರಿ ಇರಿತ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ ಹಾಗೂ ಮೂರು ತಂಡ ರಚಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ‘ಸಿಸಿಟಿವಿ ವಿಡಿಯೋ ಆಧಾರದಲ್ಲಿ 20 ಜನರನ್ನು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಮೂರು ತಂಡದ ಮೂಲಕ ತನಿಖೆ ನಡೆಯುತ್ತಿದ್ದು, ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಇನ್ನು ಮೆರವಣಿಗೆ ನಂತರ ಮೂರು ಮಂದಿ ಮಸೀದಿ ಮುಂದೆ ಘೋಷಣೆ ಕೂಗಿದ್ದಾರೆ. ನಂತರ ಅವರಿಗೆ ಹಲ್ಲೆ ನಡೆಸಲಾಗಿದೆ. ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಇದ್ದ, ಆತ ಚೂರಿ ಇಟ್ಟುಕೊಂಡಿದ್ದ. ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಗೂ ಮೊದಲು ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದರು. ಮುಂದಿನ ದಿನಗಳಲ್ಲಿ ಎಲ್ಲಾ ಠಾಣೆಗಳಲ್ಲಿ, ಎಲ್ಲ ಧರ್ಮದ ಪ್ರಮುಖರನ್ನು ಕರೆದು ಶಾಂತಿ ಸಭೆ ನಡೆಸುತ್ತೇವೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದರು.

Ad
Ad
Nk Channel Final 21 09 2023
Ad