ಮಂಗಳೂರು : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿದೆ ಎಂದು ಮ-ಮಂಗಳೂರು ಕ್ಯಾಂಪನ್ ಪ್ರೊ. ವೈಸ್ ಚಾನ್ಸಲರ್ ಡಾ. ದಿಲೀಪ್ ಜಿ. ನ್ಯಾಕ್ ಘೋಷಿಸಿದ್ದಾರೆ.

ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಅವರು, ಗಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧೈಯವನ್ನು ಹೊಂದಿದ್ದ ಮಣಿಪಾಲ್ ಸಂಸ್ಥೆಯ ಸಂಸ್ಥಾಪಕ ಡಾ. ಟಿ.ಎಂ.ಎ. ಪೈ ಅವರ ದೂರದೃಷ್ಟಿಯ ನಾಯಕತ್ವವನ್ನು ನೆನಪಿಸಿದರು. “2000 ನೇ ವರ್ಷದಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 25 ವರ್ಷಗಳಲ್ಲಿ ಲಕ್ಷಾಂತರ ಫಲಾನುಭವಿಗಳಿಗೆ ವರದಾನವಾಗಿದೆ ಎಂದಿದ್ದಾರೆ.

2000 ನೇ ಇಸವಿಯಲ್ಲಿ, 10500 ಸದಸ್ಯರು ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು. ಕಳೆದ ಹಣಕಾಸು ವರ್ಷದಲ್ಲಿ 3.68 ಲಕ್ಷ ಕುಟುಂಬಗಳು ಈ ಯೋಜನೆಗಳ ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಿದೆ” ಎಂದು ತಿಳಿಸಿದರು.

ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಉನ್ನಿಕೃಷ್ಣನ್ ಬಿ ಮಾತನಾಡಿ “ಈ ಯೋಜನೆಯಡಿಯಲ್ಲಿ – ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದೇವೆ. ಈ ಅರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ್ ಸಮೂಹ ಅಸ್ಪತ್ರೆಗಳಾದ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ.ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಮರ್ಗಾ ನಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಹಾಗೂ ಮಣಿಪಾಲ್ ಆಸ್ಪತ್ರೆ ಗೋವಾಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು. ಈ ಕಾರ್ಡ್ ಸೌಲಭ್ಯಗಳು ದಂತ ಚಿಕಿತ್ಸೆಗೂ ಅನ್ವಯವಾಗಲಿದ್ದು ಕಾರ್ಡುದಾರರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ನಾಯನ್ಸಸ್ ಮಂಗಳೂರು ಮತ್ತು ಮಣಿಪಾಲದಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು” ಎಂದು ತಿಳಿಸಿದರು.

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇಲ್ಲಿನ ಮುಖ್ಯ ಆಡಳಿತಾಧಿಕಾರಿ ಡಾ. ಶಿವಾನಂದ ಪ್ರಭು ಕಾರ್ಡಿನ ಸದಸ್ಯತ್ವದ ಬಗ್ಗೆ ಮಾತನಾಡಿ, ‘ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 350/-ಕೌಟಂಬಿಕ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ ಮತ್ತು 25 ವರ್ಷದ ಒಳಗಿನ ಮದುವೆಯಾಗದ ಮಕ್ಕಳಿಗೆ ರೂ. 700/- ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ. 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 900/- ಆಗಿರುತ್ತದೆ. ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 600/-, ಕುಟುಂಬಕ್ಕೆ ರೂ. 950/-ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 1100/- ಆಗಿರುತ್ತದೆ. ಈ ರಚನಾತ್ಮಕ ವಿಧಾನವು ವ್ಯಕ್ತಿಗಳಿಗೆ ಮತ್ತು ಕುಟುಂಬಗಳಿಗೆ ಸಮಗ್ರ ಆರೋಗ್ಯ ಸೇವೆ ಸುಲಭವಾಗಿ ಲಭ್ಯವಾಗುವಂತೆ ಮತ್ತು ಕೈಗೆಟುಕುವಂತೆ ಮಾಡುತ್ತದೆ” ಎಂದು ವಿವರಿಸಿದರು.