ಮಂಗಳೂರು: ಬಿಜೆಪಿಯ ‘ಪ್ರಜಾಪ್ರಭುತ್ವ ಉಳಿಸಿ–ಅರಾಜಕತೆ ಅಳಿಸಿ’ ಅಭಿಯಾನದ ಅಂಗವಾಗಿ ನವೆಂಬರ್ 6ರಂದು ಮಂಗಳೂರಿನಲ್ಲಿ ಬೃಹತ್ ಪಾದಯಾತ್ರೆ ನಡೆಯಲಿದೆ. ಮಧ್ಯಾಹ್ನ 3:00 ಗಂಟೆಗೆ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನ ಸೌಧದಿಂದ ಕುಣಿತ ಭಜನೆ, ನಾಸಿಕ್ ಬ್ಯಾಂಡ್, ಚಂಡೆಯೊಂದಿಗೆ ಇಪ್ಪತ್ತು ಸಾವಿರಕ್ಕೂ ಅಧಿಕ ಜನ ಬೃಹತ್ ಪಾದಯಾತ್ರೆಯಲ್ಲಿ ಸಾಗಿ, ಕದ್ರಿ ಮೈದಾನಕ್ಕೆ ತಲುಪಿ ಅಲ್ಲಿಯೇ ಸಾರ್ವಜನಿಕ ಸಭೆ ನಡೆಯಲಿದೆ.
ಈ ಸಂದರ್ಭದಲ್ಲಿ ಭಾರತದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವರು ಮತ್ತು ಖ್ಯಾತ ಮಲಯಾಳಂ ಚಿತ್ರನಟ ಸುರೇಶ್ ಗೋಪಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯರವರು ಉಪಸ್ಥಿತರಿರಲಿದ್ದಾರೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಇರುವ ಈ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.

