ಮಂಗಳೂರು : ದ.ಕ. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ, ಟೂರಿಸ್ಟ್, ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ರಿಕ್ಷಾ ಚಾಲಕರು ಪ್ರತಿಭಟನೆ ನಡೆಯಿತು.
ವಾಹನಗಳ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಯಿಂದ ಆಟೋ ಚಾಲಕರು ತತ್ತರಿಸಿದ್ದಾರೆ. ಮಂಗಳೂರು ನಗರದಲ್ಲಿ ರಿಕ್ಷಾ ಪಾರ್ಕ್ ಮತ್ತು ಬೈಕ್ ಟ್ಯಾಕ್ಸಿ, ಓಲಾ ಉಬರ್,ನಮ್ಮ ಯಾತ್ರಿ. ಇಂತಹ ಕಂಪನಿಗಳಿಂದ ತೀವ್ರ ತೊಂದರೆಯಾಗುತ್ತಿದ್ದು ಇದನ್ನು ಸರಿಪಡಿಸುವಂತೆ ಆಗ್ರಹಿಸಿದರು.
ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳು ಪರವಾನಿಗೆಯಿಲ್ಲದೆ ಜಿಲ್ಲೆಯಾದ್ಯಂತ ಸಂಚರಿಸಲು ಅವಕಾಶ ನೀಡಿರುವುದು ಖಂಡನೀಯ, ಆದಷ್ಟು ಬೇಗ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ಪರವಾನಿಗೆ ನೀಡುವಂತೆ ಆಗ್ರಹಿಸಿದರು, ಪರವಾನಿಗೆರಹಿತ ಅನಧಿಕೃತ ವಲಯ ಸಂಖ್ಯೆಯನ್ನು ಹಾಕಿ ಸಂಚರಿಸುತ್ತಿದ್ದು, ಇದನ್ನು ಪರಿಶೀಲಿಸಿ ಕ್ರಮಕ್ಕೆ ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ರಾಮಣ್ಣ ವಿಟ್ಲ ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ ಇ, ಜಿಲ್ಲಾ ಮುಖಂಡ ಅನ್ಸಾರ್, ದ.ಕ. ಆಟೋ ಚಾಲಕರ ಸಂಘದ ಅಧ್ಯಕ್ಷರಾದ ವಿಷ್ಣುಮೂರ್ತಿ ಮುಖಂಡರಾದ ಸಂದೀಪ್, ಅಸ್ಪಕ್ ದಿನೇಶ್ ಬಾಬು, ಜಾವಿದ್, ಇಂಯ್ತಿಯಾಝ್, ಯೋಗೇಂದ್ರ, ಜಾರ್ಜ್ ಉಪಸ್ಥಿತರಿದ್ದರು.

