ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮೇಲೆ ಲೋಕಾಯುಕ್ತ ದಾಳಿ ಹಿನ್ನಲೆ ಪಾಲಿಕೆ ಆಯುಕ್ತ ಆನಂದ್ ವಜಾಗೊಳಿಸುವಂತೆ ಒತ್ತಾಯಿಸಿ ಸಿ.ಪಿ.ಐ.ಎಂ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.
ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರೊಟೆಸ್ಟ್ ನಡೆಸುತ್ತಿದ್ದು ಪ್ರತಿಭಟನೆ ಬಳಿಕ ಪಾಲಿಕೆ ಮುಂಭಾಗದ ರಸ್ತೆ ಮೇಲೆ ಕೂತು ತಡೆಗೆ ಯತ್ನಿಸಿದ್ದಾರೆ. ಈ ವೇಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ʻಕಮೀಷನರ್ ಹಟಾವೋ MCC ಬಚಾವೋʼ ಎಂದು ಘೋಷಣೆ ಕೂಗುತ್ತ ಪ್ರತಿಭಟಿಸುತ್ತಿದ್ದ ಅವರು, ಜನರ ತೆರಿಗೆ ದುಡ್ಡಿನಿಂದ ಅಕ್ರಮ ಆಸ್ತಿ ಸಂಪಾದಿಸಿರೋದಾಗಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.ಕೆಲ ದಿನಗಳ ಹಿಂದಷ್ಟೇ ಮಂಗಳೂರು ಪಾಲಿಕೆ ಆಯುಕ್ತ ಆನಂದ್ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು ಈ ಹಿನ್ನಲೆ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

