Bengaluru 28°C
Ad

ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ಪುನರ್ ನಿರ್ಮಾಣಕ್ಕೆ ಪೂರ್ವಭಾವಿ ಸಭೆ

ಬಿಸಿರೋಡಿನ ಹೃದಯಭಾಗದಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಹೆಸರಿನಲ್ಲಿರುವ ವೃತ್ತವನ್ನು ಮಾದರಿಯಾಗಿ ಪುನರ್ ನಿರ್ಮಾಣ ಮಾಡುವ ಬಗ್ಗೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಮುದಾಯದ ಪ್ರಮುಖರ ಜೊತೆ ಸಭೆ ನಡೆಯಿತು.

ಬಂಟ್ವಾಳ: ಬಿಸಿರೋಡಿನ ಹೃದಯಭಾಗದಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಹೆಸರಿನಲ್ಲಿರುವ ವೃತ್ತವನ್ನು ಮಾದರಿಯಾಗಿ ಪುನರ್ ನಿರ್ಮಾಣ ಮಾಡುವ ಬಗ್ಗೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಮುದಾಯದ ಪ್ರಮುಖರ ಜೊತೆ ಸಭೆ ನಡೆಯಿತು.

ಬಿಸಿರೋಡು- ಅಡ್ಡ ಹೊಳೆ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಇಲ್ಲಿರುವ ವೃತ್ತವನ್ನು ಕೆಡವಲಾಗಿತ್ತು. ಇದೀಗ ಹೊಸತಾಗಿ ವೃತ್ತ ನಿರ್ಮಾಣ ಮಾಡುವ ವೇಳೆ ಯಾವ ರೀತಿಯಲ್ಲಿ ಹೊಸತನ ನೀಡಿ ವೃತ್ತ ನಿರ್ಮಾಣ ಮಾಡಬಹುದು ಎಂಬ ಯೋಜನೆಗೆ ಪೂರಕವಾಗಿ
ಪೂರ್ವಭಾವಿ ಸಭೆ ನಡೆಸಿದರು. ವೃತ್ತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಸಿರೋಡಿನ ಸಮುದಾಯದ ಪ್ರಮುಖನ್ನೊಳಗೊಂಡ ಸಮಿತಿ ರಚನೆ ಮಾಡಲಾಗುತ್ತದೆ ಎಂದು ತಿಳಿಸಿದ ಅವರುಪ್ರಮುಖರ ಸಲಹೆಗಳನ್ನು ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಿ ಅದರ ಆಧಾರದ ಮೇಲೆ ಸುಂದರವಾದ ನಕಾಶೆ ತಯಾರಿಸಿ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿ ಎಂದು ಅವರು ತಿಳಿಸಿದರು.

ಜಿಲ್ಲೆಯ ಸಂಸ್ಕೃತಿಯನ್ನು ತಿಳಿದಿರುವ ವ್ಯಕ್ತಿಯಿಂದ ಉತ್ತಮ ಗುಣಮಟ್ಟದ ನಕಾಶೆಯನ್ನು ತಯಾರಿಸಿ, ಬಳಿಕ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅಂತಿಮ ಸ್ಪರ್ಶ ನೀಡುವ ಬಗ್ಗೆ ಅವರು ಸಭೆಯಲ್ಲಿ ತಿಳಿಸಿದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಅತೀ ಹೆಚ್ಚು ಉದ್ದದ ರಾಷ್ಟ್ರೀಯ ಹೆದ್ದಾರಿಯಲ್ಲಿ
ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿಉತ್ತಮ ರೀತಿಯಲ್ಲಿ ಈ ವೃತ್ತದ ನಿರ್ಮಾಣವಾಗಬೇಕಾಗಿದೆ ಎಂದು ಅವರು ತಿಳಿಸಿದರು.

ವೃತ್ತ ನಿರ್ಮಾಣದ ಜೊತೆಯಲ್ಲಿ ಪ್ಲೈ ಓವರ್ ನ ಮೇಲೆ ವಿದ್ಯುತ್ ದೀಪಗಳನ್ನು ಅಳವಡಿಸಲು ಸಂಸದರು ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಬೂಡ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಅಜ್ಮಿ , ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಬಿಲ್ಲವ ಸಂಘದ ತಾಲೂಕು ಅದ್ಯಕ್ಷ ಸಂಜೀವ ಪೂಜಾರಿ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಿಲ್ಲವ ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮತ್ತಿತರರು ಉಪಸ್ಥಿತರಿದ್ದರು,ಹರಿಕೃಷ್ಣ ಬಂಟ್ವಾಳ ಸ್ವಾಗತಿಸಿದರು.

Ad
Ad
Nk Channel Final 21 09 2023