ಮಂಗಳೂರು : ಆರೆಸ್ಸೆಸ್ ಚಟುವಟಿಕೆಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯ ಸರಿಯಾಗಿದೆ. ಕಾಂಗ್ರೆಸ್ ಪಕ್ಷ ಪ್ರಿಯಾಂಕ್ ಪರ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆರೆಸ್ಸೆಸ್ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುತ್ತಿದೆ. ದ.ಕ. ಜಿಲ್ಲೆಯಲ್ಲೂ ವಾತಾವರಣ ಕಲುಷಿತಗೊಳ್ಳಲು ಆರೆಸ್ಸೆಸ್ ಪ್ರಭಾವವೇ ಕಾರಣ ಎಂದು ರಮಾನಾಥ ರೈ ಆರೋಪಿಸಿದರು.

