Ad

ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜೊತೆ ಪತ್ತೆ

ಇತ್ತೀಚೆಗೆ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಕ್ರಿಮಿನಲ್ ಹಿನ್ನಲೆಯುಳ್ಳ ಯುವಕನ ಜೊತೆ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಮಂಗಳೂರು : ಇತ್ತೀಚೆಗೆ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಕ್ರಿಮಿನಲ್ ಹಿನ್ನಲೆಯುಳ್ಳ ಯುವಕನ ಜೊತೆ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

Ad
300x250 2

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯೊಬ್ಬಳು ಕಾಣಿಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಕಾರ್ಯಚರಣೆ ನಡೆಸಿದ ಪಾಂಡೇಶ್ವರ ಠಾಣಾ ಪೊಲೀಸರು, ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಮಾಡಿದ್ದಾರೆ.

ಆದರೆ ಆಕೆ ಇದ್ದಿದ್ದು, ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳಲ್ಲಿರುವ ಮಹಮ್ಮದ್ ಅಶ್ಪಕ್ ಎಂಬ ಯುವಕನ ಜೊತೆ ಎಂದು ಹೇಳಲಾಗಿದೆ. ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು, ಈತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಪ್ರಕರಣಗಳು ಇವೆ.

ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆಂದು ಹುಡುಗಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ಗೆ ದೂರು ನೀಡಿದ್ದಾರೆ.

ಇನ್ನು ಇದೊಂದು ಲವ್ ಜಿಹಾದ್ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸುತ್ತಿದೆ. ಲವ್ ಜಿಹಾದ್ ಕರಾವಳಿಯಲ್ಲಿ ಹೆಚ್ಚುತ್ತಿದೆ. ಇದರ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರ ‘ಲವ್ ಜಿಹಾದ್’ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರಬೇಕಾಗಿದೆ ಎಂದು ವಿಶ್ವಹಿಂದೂ ಪರಿಷದ್‌ ಶರಣ್ ಪಂಪ್ವೆಲ್‌ ಹೇಳಿದ್ದಾರೆ.

Ad
Ad
Nk Channel Final 21 09 2023
Ad