ಬೆಳ್ತಂಗಡಿ: ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡು ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.

ಗಾಯಾಳು ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಶಾಸಕರು, ಅವರ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಅಪಘಾತದ ತೀವ್ರತೆಗೆ ಆತಂಕಕ್ಕೊಳಗಾಗಿದ್ದ ಪೋಷಕರಿಗೆ ಸಾಂತ್ವನ ಹೇಳಿದ ಅವರು, ವಿದ್ಯಾರ್ಥಿನಿಯರ ಶೀಘ್ರ ಚೇತರಿಕೆಗೆ ಹಾರೈಸಿದರು.

ಕೆಎಸ್‌ಆರ್‌ಟಿಸಿ ಬಸ್‌ಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಶಾಸಕರ ಈ ಭೇಟಿ ಮಹತ್ವ ಪಡೆದುಕೊಂಡಿದೆ.