ಮಂಗಳೂರು: ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಮುಸ್ಲಿಮರನ್ನ ಹೊಣೆಯಾಗಿಸಿ ಪ್ರತಿಭಟನೆ ನಡೆಸಿ ‘ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ’ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ವೆಲ್‌ಗೆ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲು ಹಾಕಿ ಸಾಮಾಜಿಕ ಮಾಧ್ಯಮಗಳಲ್ಲಿ ಆಡಿಯೋ ರವಾನಿಸಿದ ಘಟನೆ ನಡೆದಿದೆ. ಧಮ್ ಇದ್ರೆ ಬಿಸಿ ರೋಡ್‌ಗೆ ಬಾ ಎಂದು ಅವರು ಚಾಲೆಂಜ್ ಹಾಕಿದ್ದಾರೆ.
ವಾಟ್ಸಪ್ ನಲ್ಲಿ ಆಡಿಯೋ ಮೂಲಕ ಸವಾಲು ಹಾಕಿರುವ ಶರೀಫ್ ಅವರ ಸವಾಲು ಸ್ವೀಕರಿಸಿರುವ ಹಿಂದುತ್ವ ಸಂಘಟನೆ ಮುಖಂಡರು, ಬಿಸಿರೋಡ್ ಚಲೋಗೆ ಕರೆ ಕೊಟ್ಟಿದ್ದಾರೆ. ವಿಶ್ವ ಹಿಂದೂ ಪರಿಷತ್ , ಭಜರಂಗದಳದಿಂದ ಬಿಸಿರೋಡ್ ಚಲೋಗೆ ಕರೆ ನೀಡಲಾಗಿದೆ. ಸಾಮಾಜಿಕ ಜಾಲತಾಣ ಮೂಲಕ ಹಿಂದೂ ಸಂಘಟನೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶರಣ್ ಪಂಪ್ವೆಲ್ ಮನವಿ ಮಾಡಿದ್ದಾರೆ.
ಈ ಮಧ್ಯೆ ದ.ಕ. ಬಜರಂಗದಳ ಮುಖಂಡ ಪುನೀತ್ ಅತ್ತಾವರನನ್ನು ಮಂಡ್ಯದಲ್ಲಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆಡಿಯೋದಲ್ಲಿ ಸವಾಲೆಸೆದ ಶರೀಫ್‌ರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದೂ ಹೇಳಲಾಗುತ್ತಿದೆ.ಮಂಡ್ಯದ ಪಾಂಡವಪುರದ RSS ಕಾರ್ಯಲಯಕ್ಕೆ ಆಗಮಿಸುವಾಗ ಪುನೀತ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮ ವರದಿಯಾಗಿದೆ.
ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ಆಡಿಯೋ ರಿಲೀಸ್ ಮಾಡಲಾಗಿದ್ದು, ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ ಎಂದು ಶರೀಫ್ ಒಡ್ಡಿದ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು. ಈ ನಡುವೆ ಮಧ್ಯರಾತ್ರಿ ಪೊಲೀಸರು ಪುನೀತ್ ಅತ್ತಾವರರನ್ನು ಮಂಡ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ