Bengaluru 23°C
Ad

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು.

ಬೆಳ್ತಂಗಡಿ: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು.

ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

Ad
Ad
Nk Channel Final 21 09 2023
Ad