Bengaluru 22°C
Ad

ಮಳೆಗಾಲ : ಪ್ರಾಕೃತಿಕ ವಿಕೋಪದ ಸಮಸ್ಯೆಗಳಿಗೆ ಮಹಾನಗರಪಾಲಿಕೆ ಕಂಟ್ರೋಲ್‌ ರೂಂ

ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಮಂಗಳೂರು:  ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.  ಜಿಲ್ಲೆಯಾದ್ಯಂದ ಮಳೆಯಿಂದಾಗಿ ಆಗುವಂತ ಸಮಸ್ಯೆಗೆ ತಕ್ಷಣ ಮಹಾನಗರಪಾಲಿಕೆ ಕಂಟ್ರೋಲ್‌ ರೂಂ ಲಭ್ಯವಿರುತ್ತದೆ.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಸಮಸ್ಯೆಗಳಿಗೆ ಪಾಲಿಕೆಯಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 0824 -2220306 ಅಥವಾ ವಾಟ್ಸಾಪ್ ಸಂಖ್ಯೆ 9449007722 ಸಂಪರ್ಕಿಸಿ ಸಾರ್ವಜನಿಕರು ಮಳೆಯಿಂದ ಉಂಟಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

Ad
Ad
Nk Channel Final 21 09 2023
Ad