Bengaluru 21°C
Ad

ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​ : ಐವರ ಬಂಧನ

ದಕ್ಷಿಣ ಕನ್ನಡದ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುತ್ತಾ ವಿಜಯೋತ್ಸವ ಆಚರಣೆ ಮಾಡಿದ್ದಕ್ಕಾಗಿ ಇಬ್ಬರಿಗೆ ಚೂರಿ ಇರಿದ ಮುಸ್ಲಿಂ

ಮಂಗಳೂರು: ದಕ್ಷಿಣ ಕನ್ನಡದ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುತ್ತಾ ವಿಜಯೋತ್ಸವ ಆಚರಣೆ ಮಾಡಿದ್ದಕ್ಕಾಗಿ ಇಬ್ಬರಿಗೆ ಚೂರಿ ಇರಿದ ಮುಸ್ಲಿಂ ಗುಂಪಿನ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18), ಹಫೀಝ್(24) ಬಂಧಿತರು.

ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ವೇಳೆ ರಾಜ್ಯದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡುತ್ತಾ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗುತ್ತಾ ಬೈಕ್‌ನಲ್ಲಿ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಸುಮಾರು 20-25 ಜನರ ಮುಸ್ಲಿಮರ ಗುಂಪು ಬೆನ್ನಟ್ಟಿ ಇಬ್ಬರಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲಿಯೇ ಸಿಸಿಟಿವಿ ಕ್ಯಾಮೆರಾ ಅಧರಿಸಿ ಕೊಣಾಜೆ ಪೊಲೀಸರು ಐವರು ಮುಸ್ಲಿಂ ಆರೋಪಿಗಳನ್ನು ಬಂಧಿಸಿದ್ದಾರೆ.

Ad
Ad
Nk Channel Final 21 09 2023
Ad