ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಗುರುವಾರ, ನವೆಂಬರ್ 19ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಿದ ನೂತನ ಐಜಿಪಿ ಎನ್. ಶಶಿಕುಮಾರ್ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಅವರು ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆಯ ಮುಂದಿನ ಆದ್ಯತೆಗಳ ಬಗ್ಗೆ ಮಾತನಾಡಿದರು.

