ಹಂಚಿನ ಕಾರ್ಖಾನೆಯ ಕಾರ್ಮಿಕರಾಗಿ ದುಡಿದು, ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಯ ಹಿರಿಯ ಸದಸ್ಯರು, ಪ್ರತಿಯೊಂದು ಕಮ್ಯುನಿಸ್ಟ್ ಚಳವಳಿಯಲ್ಲಿ ಭಾಗವಹಿಸುತ್ತಿದ್ದ ಸಂಗಾತಿ ನಾಗಪ್ಪ ಅಮೀನ್, ಕೆಂಜಾರ್ ಅಲ್ಪಕಾಲದ ಅಸೌಖ್ಯದ ಬಳಿಕ ಇಂದು (6.1.2025) ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ದ ದ.ಕ ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಬಿ. ಶೇಖರ್, ನಿಕಟಪೂರ್ವ ಕಾರ್ಯದರ್ಶಿ ವಿ.ಕುಕ್ಯಾನ್, ಎಐಟಿಯುಸಿ ಜಿಲ್ಲಾಧ್ಯಕ್ಷರಾದ ಹೆಚ್.ವಿ. ರಾವ್,
ಕಾರ್ಯದರ್ಶಿ ವಿ.ಎಸ್. ಬೇರಿಂಜ, ಎಐಟಿಯುಸಿ ಜಿಲ್ಲಾ ಸಹ ಕಾರ್ಯದರ್ಶಿಗಳಾದ ಸುರೇಶ್ ಕುಮಾರ್ ಬಂಟ್ವಾಳ್, ಕರುಣಾಕರ್ ಮಾರಿಪಲ್ಲ, ಎಐವೈಎಫ್ ಜಿಲ್ಲಾ ನಾಯಕರಾದ ಜಗತ್ಪಾಲ್ ಕೋಡಿಕಲ್ ಮುಂತಾದವರು ಮೃತರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.