ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ನಿನ್ನೆ ಸಂಜೆ ಯುಟ್ಯೂರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕನ್ಯಾಡಿ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಎಂದು ಗುರುತಿಸಲಾಗಿದೆ.
ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಅಗಸ್ಟ್ 6 ಸಂಜೆ ವೇಳೆ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಲಾಗಿತ್ತು. ಈ ಕುರಿತಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 189(2),191(2),115(2),324(5),352,307 ಜೊತೆಗೆ 190 BNS ಅಡಿಯಲ್ಲಿ ಸುಮಾರು 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗುರುತಿಸಿದ ಪೊಲೀಸರು ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು ಚಾಲಕ ಸೋಮನಾಥ ಸಪಲ್ಯನನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿರುವುದಾಗಿ ತಿಳಿದುಬಂದಿದೆ.

