ಬೆಂಗಳೂರು: ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಕ್ಯಾಸಲ್ರಾಕ್, ಮಂಕಿ, ಕೊಟ್ಟಿಗೆಹಾರ, ಲೋಂಡಾ, ಕುಮಟಾ, ಕದ್ರಾ, ಶಿರಾಲಿ, ಕೊಲ್ಲೂರು, ಗೋಕರ್ಣ, ಸೇಡಂ, ಆಗುಂಬೆಯಲ್ಲಿ ಮಳೆಯಾಗಿದೆ.
ಇನ್ನು ಇಂದು ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರ ಇಂದು ರಜೆ ಘೋಷಿಸಲಾಗಿದೆ.

