ದಕ್ಷಿಣ ಕನ್ನಡ : ಬಿಸಿಲೆಘಾಟ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ ವಾಹನಕ್ಕೆ ಅಡ್ಡ ಬಂದು ಹುಚ್ಚಾಟ ಮೆರೆದಿದ್ದ ಸ್ಕೂಟರ್ ಸವಾರನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಂಬ್ಯುಲೆನ್ಸ್ ವಾಹನಕ್ಕೆ ಅಡ್ಡಗಟ್ಟಿ ಹುಚ್ಚಾಟ ಮೆರೆದಿದ್ದ ವ್ಯಕ್ತಿಯನ್ನು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರು ಎಂದು ಗುರುತಿಸಲಾಗಿದೆ. ಬಿಸಿಲೆಘಾಟ್ ನಲ್ಲಿ ಮದುವೆಗೆ ಹೋಗುತ್ತಿದ್ದ ಮಿನಿಬಸ್ ಪಲ್ಟಿಯಾಗಿತ್ತು, ಅದರಲ್ಲಿ ಹಲವರು ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದವರನ್ನು ಮಂಗಳೂರಿಗೆ ಕರೆತರುತ್ತಿದ್ದ ಅಂಬ್ಯುಲೆನ್ಸ್ ನ ಬಿಸಿರೋಡ್ ಬಳಿ ದಾರಿ ಬಿಡದೆ ಹುಚ್ಚಾಟ ಮೆರೆದಿದ್ದ ಸ್ಕೂಟರ್ ಸವಾರನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.

