ಮಂಗಳೂರು : ಅಕ್ರಮ ಜಾನುವಾರು ಸಾಗಾಟವನ್ನು ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಬಳಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು. ಆರೋಪಿಗಳಾದ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ಫಕ್, ಅಬ್ದುಲ್ ಮೊಹಮ್ಮದ್ ನಿಶಾಮ್.
ಅದರಲ್ಲಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

