ಮಂಗಳೂರು: ನಾಗುರಿ ದುರಂತಕ್ಕೆ ಕಳಪೆ ಕಾಂಪೌಂಡ್ ಗೋಡೆ ಕುಸಿತ ಕಾರಣ ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸಲು ಆದೇಶ ಹೊರಡಿಸಲಾಗಿದೆ. ಮನೆಯ ಮೇಲೆ ಕಾಂಪೌಂಡ್ ಗೋಡೆ ಕುಸಿದ ಹಿನ್ನಲೆ ದುರಂತ ಸಂಭವಿಸಿದೆ. ಮನೆಯ ಹಿಂಭಾಗದ ಗೋಡೆ ಮೇಲೆ ಕಾಂಪೌಂಡ್ ಕುಸಿದು ಬಿದ್ದಿದೆ.
ಮಳೆಗಾಲದ ನೀರಿನ ಒತ್ತಡಕ್ಕೆ ಗೋಡೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗೋಡೆಯ ಕಾಮಗಾರಿ ದೋಷದ ಕುರಿತು ತೀವ್ರ ತನಿಖೆ ನಡೆಯುತ್ತಿದೆ. ವೈಜ್ಞಾನಿಕ ಕಾರಣಗಳ ಪತ್ತೆಗೆ ಮುಂದುವರಿದಿದೆ. ಕಳಪೆ ಕಾಮಗಾರಿ ನಡೆದಿದ್ರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಅನಧಿಕೃತವಾಗಿ ಗುಡ್ಡ ಅಗೆದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದ ತನಿಖೆಗಾಗಿ ತಾಂತ್ರಿಕ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗಿದೆ. ತಾಂತ್ರಿಕ ವರದಿ ಕೈ ಸೇರಿದ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದರು.

