Bengaluru 22°C
Ad

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಬಂಧನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ.

ದಕ್ಷಿಣ ಕನ್ನಡ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ.

Ad

ಇತ ವಿದೇಶಕ್ಕೆ ಪರಾರಿಯಾಗುಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು ಬಂಧಿಸಿದ್ದರು.

Ad

ಏನಿದು ಪ್ರಕರಣ,
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್​ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಈ ಹಿನ್ನಲೆ ಎನ್​ಐಎ ಅಧಿಕಾರಿಗಳು ತನಿಖೆ ಶುರು ಮಾಡಿದ್ದು, ಇದೀಗ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

Ad
Ad
Ad
Nk Channel Final 21 09 2023