ಮಂಗಳೂರು: ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಬಾಂಗ್ಲಾ ವಲಸಿಗರ ಹಸ್ತಾಂತರಕ್ಕೆ ಸಿದ್ಧತೆ ನಡೆಯಿತು. ಮಂಗಳೂರು ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ತಿಂಗಳ ಹಿಂದೆ ಮಂಗಳೂರಿನ ವಿವಿಧೆಡೆಗಳಿಂದ ಅಕ್ರಮ ವಲಸಿಗರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು.
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಅಡಗಿಕೊಂಡಿದ್ದರು. ವಿವಿಧೆಡೆ ದಾಳಿ ನಡೆಸಿ 23 ಬಾಂಗ್ಲಾ ಅಕ್ರಮ ವಲಸಿಗರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿತು.
ಬಿಗಿ ಬಂದೋಬಸ್ತ್ ಮೂಲಕ ಅಕ್ರಮ ವಲಸಿಗರನ್ನು ಪಶ್ಚಿಮ ಬಂಗಾಳದ ಮಾಲ್ಡಾ ಕ್ಕೆ ಮಂಗಳೂರು ಪೊಲೀಸರು ಕರೆದ್ಯೊಲಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆದೊಕೊಂಡು ಹೋದ ಹಿರಿಯ ಪೊಲೀಸ್ ಅಧಿಕಾರಿಗಳನ್ಬು ಒಳಗೊಂಡ 30 ಮಂದಿ ಪೊಲೀಸರ ತಂಡವಿತ್ತು.
ಪಶ್ಚಿಮ ಬಂಗಾಳದ ಮಾಲ್ಡಾ ಕ್ಕೆ ತೆರಳಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರ ತಂಡ ಕರೆದುಕೊಂಡು ಹೋಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳಕ್ಕೆ ಪೊಲೀಸರ ತಂಡ ತೆರಳಿದೆ.
ಆಗಸ್ಟ್ 26 ರಂದು ಪಶ್ಚಿಮ ಬಂಗಾಳದ ಭಾರತದ ಗಡಿಯಲ್ಲಿ BSF (ಗಡಿ ರಕ್ಷಣಾ ಪಡೆ) ಅಧಿಕಾರಿಗಳಿಗೆ ಮಂಗಳೂರು ಪೊಲೀಸರು ಹಸ್ತಾಂತರಿಸಲಿದ್ದಾರೆ. ನಿರಕ್ಷಣಾ ಕೇಂದ್ರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು BSF ಇರಿಸಲಿದೆ. ಕೆಲವು ತಾಂತ್ರಿಕ ಪ್ರಕ್ರಿಯೆ ಮುಗಿದ ಬಳಿಕ ಬಾಂಗ್ಲಾದೇಶಕ್ಕೆಅಕ್ರಮ ಬಾಂಗ್ಲಾದೇಶಿಗಳು ಗಡಿಪಾರು ಆಗಲಿದ್ದಾರೆ.

