ಪಡುಬಿದ್ರಿ: ಹಿರಿಯರು ಮಠ, ಮಂದಿರಗಳಿಗೆ ಉಳಿವಿಗೆ ಜಮೀನು ಮೀಸಲಿಟ್ಟಿದ್ದರು. ಆದರೆ ಇಂದು ಮಠ, ಮಂದಿರಗಳ, ಕೃಷಿಕರ ಜಮೀನು ವಕ್ಫ್ ಆಸ್ತಿಯಾಗಿ ಪರಿವರ್ತನೆಗೊಂಡಿವೆ. ಸಚಿವ ಜಮೀರ್ ಅಹಮದ್ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡು ದಾಖಲೆಗಳನ್ನು ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಾಜಿ ಶಾಸಕ ಲಾಲಾ ಜಿ ಆರ್ ಮೆಂಡನ್ ಮಾತನಾಡಿ ಕರ್ನಾಟಕದಲ್ಲಿ ಬಿಜೆಪಿ ನೃತೃತ್ವದ ಸರ್ಕಾರ ಸಾಮರಸ್ಯದ ಬದುಕಿಗೆ ಅವಕಾಶ ಮಾಡಿಕೊಟ್ಟಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಗರಣಗಳ ಮೂಲಕ ಜನರಲ್ಲಿ ಗೊಂದಲ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು.
ವಕ್ಫ್ ಮಂಡಳಿ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಕಾನೂನು ಜಾರಿಗೆ ತರಲಿದೆಎಂದರು. ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮುಖಂಡರಾದ ಜಿತೇಂದ್ರ ಶೆಟ್ಟಿ, ಹರಿಣಾಕ್ಷಿ ದೇವಾಡಿಗ, ಸರಿತಾ, ಶ್ಯಾಮಲಾ ಕುಂದರ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಬೈಕಾಡಿ ಸುಪ್ರಸಾದ್ ಶೆಟ್ಟಿ, ಶ್ರೀಕಾಂತ್ ನಾಯಕ್, ಶಿಲ್ಪಾ ಜಿ. ಸುವರ್ಣ,ಇದ್ದರು.