ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಗಳ ಗುಂಡಿ ಮುಚ್ಚಿ ಸಂಚಾರ ಯೋಗ್ಯ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಮುಖ್ಯ ರಸ್ತೆಯ ಅಭಿವೃದ್ಧಿ ಕಡೆಗಣಿಸಿ ನಿರ್ಲಕ್ಷ್ಯ ಮಾಡುತ್ತಿರುವ ಕೆಐಎಡಿಬಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನವನ್ನು ಖಂಡಿಸಿ ಅಣಕು ಶವ ಮೆರವಣಿಗೆ, ಪ್ರತಿಭಟನೆ ನಡೆಯಿತು.

ಪ್ರತಿಭಟನಾ ನಿರತರು ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.