ಮಂಗಳೂರು : ಮರಳು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಸೋಮವಾರ (ಜು.14) ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಮರಳು ನೀತಿ ಮಾಡುವುದಾಗಿ ಕಾಂಗ್ರೆಸ್ ನೀಡಿದ ಭರವಸೆ ಈಡೇರಿಸಿಲ್ಲ. ಕಾರ್ಮಿಕರು ವ್ಯಾಪಾರಸ್ಥರ ಮೇಲೆಯೂ ಪರಿಣಾಮ ಬಿದ್ದಿದೆ. ಮನೆ ಕಟ್ಟುವವರಿಗೆ ಕಲ್ಲು, ಮರಳು ಸಿಗುತ್ತಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಮೇಶ್ ಕಂಡೆಟ್ಟು, ಸುಧೀರ್ ಶೆಟ್ಟಿ ಕಣ್ಣೂರು, ದಿವಾಕರ ಪಾಂಡೇಶ್ವರ್, ಮೋನಪ್ಪ ಭಂಡಾರಿ ಮೊದಲಾದವರು ಭಾಗವಹಿಸಿದ್ದರು.