ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯನಾರಾಯಣ ಅಡಿಗ ಎಂಬಾತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಜೂನ್ 5 ರಂದು,

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ :42/2025 ಕಲಂ: 353(2), 196(1) (ಎ) ಬಿಎನ್‌ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.