ಪುತ್ತೂರು : ದರ್ಬೆ ಗಲಾಟೆ ವಿಚಾರವಾಗಿ ಪುತ್ತೂರಿನಲ್ಲಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಸಣ್ಣ ವಿಚಾರವನ್ನ ಮುಂದಿಟ್ಟುಕೊಂಡು ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಮಹಿಳೆ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ತಾಲಿಬಾನ್ ಸಂಸ್ಕೃತಿ ಇದೆ. ತಾಲಿಬಾನ್ ಸಂಸ್ಕ್ರತಿಯ ಹೋರಾಟಗಳು ಜಾಸ್ತಿ ಆಗ್ತಾ ಇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಈ ರೀತಿಯ ಘಟನೆಗಳು ನಡಿತಿದೆ. ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾದ ಮೇಲೆ ಇಂತಹ ಘಟನೆಗಳಿಗೆ ಬೆಂಗಾವಲಾಗಿ‌ ನಿಂತಿದ್ದಾರೆ. ಪುತ್ತೂರಿನ ಶಾಸಕ ಹಾಗೂ ಗೃಹ ಸಚಿವರು ಘಟನೆ ಬಗ್ಗೆ ಮೌನ. ಈ ಘಟನೆಯ ಹಿಂದೆ ಯಾವ ಶಕ್ತಿಗಳು ಇವೆ ಎಂಬ ಸಂಶಯ ಇದೆ. ಅಂಗಡಿಯಲ್ಲಿ ನಡೆದ ಘಟನೆ ಬಗ್ಗೆ ಕಾನೂನು ಅಥವಾ ಪೊಲೀಸ್ ಇಲಾಖೆ ಮುಖಾಂತರ ಬಗೆಹರಿಸಬಹುದಿತ್ತು.

ಅದು ಬಿಟ್ಟು ಏಕಾಏಕಿ ಅಂಗಡಿಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ಮಾಡಿರುವುದು ಖಂಡನೀ. ಇಂತಹ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಲಾಗಿರುವುದಕ್ಕೆ ಕಾರಣ. ಹೊರಗಿನಿಂದ ಬಂದು ಗಲಭೆ ಎಬ್ಬಿಸಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡಿಲ್ಲ. ಪೊಲೀಸ್ ಇಲಾಖೆಗೆ ಯಾರಾದ್ರೂ ಒತ್ತಡ ಹೇರಿದ್ದಾರ?. ಯಾರು ಹಲ್ಲೆಗೊಳಗಾಗಿದ್ದಾರೆ ಅವರ ಮೇಲೆ 307 ಕೇಸ್ ಹಾಕಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಯಾವುದೇ ಕೇಸ್ ಯಾಕೆ ಹಾಕಿಲ್ಲ. ಇದು ಯಾವ ರೀತಿಯ ಕಾನೂನು. ಇದು ಕೇವಲ ಒಂದು ಮತ ಹಾಗೂ ಧರ್ಮದ ಮೇಲೆ ಕೇಸ್ ಹಾಕುವಂತ ಕ್ರೀಯೆ ಆಗಿದೆ ಎಂದರು.

ಇದಕ್ಕೆ ಯಾರ ಒತ್ತಡ ಇದೆ ಎಂಬುದು ಸ್ಪಷ್ಟ ಆಗಬೇಕು. ನೀವೇನೂ ತಾಲಿಬಾನ್ ಸಂಸ್ಕೃತಿಯನ್ನ ವಿಸ್ತಾರ ಮಾಡಲು ಹೊರಟಿದ್ದೀರಾ?. ಗೃಹ ಸಚಿವರು ಯಾಕೆ ಘಟನೆ ಬಗ್ಗೆ ಮಾತಾಡ್ತಿಲ್ಲ?. ಸರಿಯ ತಪ್ಪು ಹೇಳಿಕೆಯನ್ನ ಕೊಡಿ. ಗೃಹಸಚಿವರಿಗೆ ಆರ್ ಎಸ್ ಎಸ್ ಬಗ್ಗೆ ಮಾತಾಡುವ ದಮ್ಮು ಇದೆ. ಆದ್ರೆ ಈ ಮತೀಯವಾದ, ತಾಲಿಬಾನ್ ಸಂಸ್ಕೃತಿ ವಿರುದ್ಧ ಯಾಕೆ ಮಾತಾಡ್ತಾ ಇಲ್ಲ. ಹಲ್ಲೆ ಮಾಡಿದವರ ಮೇಲೆ 307 ಕೇಸ್ ಹಾಕದೆ ಹಲ್ಲೆಗೊಳಗಾದವರ ಮೇಲೆ ಕೇಸ್ ಹಾಕಿರೋದು ಹಾಸ್ಯಾಸ್ಪದ.

ಇದು ದೇಶದಲ್ಲೇ ಮೊದಲ ಬಾರಿಗೆ ಇಂತಹ ಕಾನೂನು. ಎಸ್ಪಿಯವರು ಜಿಲ್ಲೆಯಲ್ಲಿ ಏನು ಮಾಡುತ್ತಿದ್ದಾರೆ. ಈ ಕೂಡಲೇ ಹಲ್ಲೆ ಮಾಡಿದವರ ಮೇಲೆ ಕೇಸ್ ದಾಖಲು ಮಾಡಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ಮುಂದಕ್ಕಾಗುವ ಎಲ್ಲಾ ಘಟನೆಗಳಿಗೆ ಸರ್ಕಾರವೇ ಜವಾಬ್ದಾರಿ ಎಂದರು.

View this post on Instagram

A post shared by News Karnataka (@newskarnataka)