ಮಂಗಳೂರು : ಪುತ್ತೂರು ಯುವತಿಗೆ ವಂಚನೆ ಪ್ರಕರಣದಲ್ಲಿ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.

ಮದುವೆ ವಿಚಾರದಲ್ಲಿ ಸಂಧಾನ ಮಾತುಕತೆ ವೇಳೆ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಪೂಜಾಳವನ್ನು ಆತ ವಿವಾಹವಾಗಿ ವಿಚ್ಛೇದನ ನೀಡಲಾಗುವುದು.

ಅಲ್ಲದೆ ಈ ವೇಳೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ.

ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆತ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.