ಮಂಗಳೂರು: ರಾಹುಲ್ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಕಿಡಿಕಾರಿದರು.
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾ ಘಟಕ ಪ್ರತಿಭಟನೆ ನಡೆಸಿತು. ಮಳೆಯನ್ನೂ ಲೆಕ್ಕಿಸದೇ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಪ್ರತಿಭಟನೆ ವೇಳೆ ಬಂದ ಶ್ವಾನವನ್ನು ತೋರಿಸಿ ರಾಹುಲ್ ಗಾಂಧಿಗೆ ಹೋಲಿಸಿ ಲೇವಡಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿ ಪ್ರತಿಕೃತಿ ಧಹಿಸಿ ಆಕ್ರೋಶ ಹೊರಹಾಕಿದರು. ಬಳಿಕ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದೂ ವಿರೋಧಿ ಹೇಳಿಕೆ ನೀಡಿದ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಬೇಕು, ಆಗ ಎಲ್ಲವೂ ಸರಿಹೋಗುತ್ತದೆ ಎಂದರು.

